ಕರಾವಳಿಯ ಮೀನುಗಾರರಿಗೆ ಎಚ್ಚರಿಕೆ

Update: 2017-06-10 14:49 GMT

ಉಡುಪಿ, ಜೂ.10: ರಾಜ್ಯ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಪ್ರಭಾವದಿಂದ ಮುಂದಿನ ಎರಡು ದಿನಗಳಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಸುರಿಯುವ ಸಂಭವವಿರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದ್ದು, ಇದರಿಂದ ಕರಾವಳಿ ತೀರದ ಮೀನುಗಾರರು, ಮೀನುಗಾರಿಕೆಗಾಗಿ ಸಮುದ್ರಕ್ಕೆ ಅಥವಾ ನದಿ ಪಾತ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಮುಂಗಾರು ಬಿರುಸುಗೊಳ್ಳುವ ಸೂಚನೆ ಇದ್ದು, ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 54.4ಮಿ.ಮೀ. ಮಳೆಯಾಗಿದ್ದು, ಉಡುಪಿಯಲ್ಲಿ 52.9ಮಿ.ಮೀ., ಕುಂದಾಪುರದಲ್ಲಿ 57.3 ಹಾಗೂ ಕಾರ್ಕಳದಲ್ಲಿ 53.0ಮಿ.ಮೀ. ಮಳೆಯಾದ ಬಗ್ಗೆ ವರದಿಗಳು ಬಂದಿವೆ.

ಶುಕ್ರವಾರ ರಾತ್ರಿ ಕುಂದಾಪುರ ತಾಲೂಕು ಕೊಡ್ಲಾಡಿ ಗ್ರಾಮದ ಬಾಂಡ್ಯ ಎಂಬಲ್ಲಿ ಚಂದ್ರಾವತಿ ಎಂಬವರ ಮನೆಯ ಮೇಲೆ ಮರ ಬಿದ್ದು ತೀವ್ರ ಹಾನಿಯಾಗಿದೆ. ಇದರಿಂದ ಸುಮಾರು 30,000ರೂ. ನಷ್ಟದ ಅಂದಾಜು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News