ಕಾಪು: ಶಾಸಕರ ವಿರುದ್ಧ ಪ್ರತಿಭಟನೆ

Update: 2017-06-10 15:16 GMT

ಕಾಪು, ಜೂ. 10: ಇತ್ತೀಚೆಗೆ ಎಲ್ಲೂರಿನಲ್ಲಿ ಕಾಪು ಶಾಸಕರು ಹಾಗೂ ಅವರ ಬೆಂಬಲಿಗರು ಗ್ರಾಮಸ್ಥರೋರ್ವರರಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಶನಿವಾರ ಸಂಜೆ ಕಾಪು ಪೇಟೆಯುಲ್ಲಿ ಕಾಪು ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ನಿರಂತರ ಗೂಂಡಾಗಿರಿಗೆ ಹಲವು ಬಿಜೆಪಿ ಕಾರ್ಯಕರ್ತರು ಬಲಿಪಶುಗಳಾಗಿದ್ದಾರೆ. ಇದೀಗ ಎಲ್ಲೂರಿನಲ್ಲಿ ಶಾಸಕರ ಬಳಿ ಮೂಲಭೂತ ಸೌಕರ್ಯದ ಕಾಮಗಾರಿಯ ಬಗ್ಗೆ ಪ್ರಶ್ನಿಸಿದ ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್ ಮುಖಂಡರು ಹಲ್ಲೆಗೆ ಮುಂದಾಗುವ ಮೂಲಕ ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಧೋಗತಿಗೆ ಮುಹೂರ್ತ ಇಟ್ಟಂತಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತ ನಾಡಿದರು. ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾ ಪದಾಧಿ ಕಾರಿಗಳಾದ ಯಶ್‌ಪಾಲ್ ಸುವರ್ಣ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂ. ಸದಸ್ಯರಾದ ಶಶಿಕಾಂತ್ ಪಡುಬಿದ್ರೆ , ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಾ.ಪಂ. ಸದಸ್ಯರಾದ ನೀತಾ ಗುರುರಾಜ್, ಶಶಿಪ್ರಭಾ ಶೆಟ್ಟಿ, ರಜನಿ ಅಂಚನ್, ಪುರಸಭಾ ವಿಪಕ್ಷ ನಾಯಕ ಅರುಣ್ ಶೆಟ್ಟಿ ಪಾದೂರು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News