×
Ad

ಅಕ್ರಮ ಮರಳು ಸಾಗಾಟ: 2 ವಾಹನ ವಶ

Update: 2017-06-10 20:58 IST

ಪಡುಬಿದ್ರಿ, ಜೂ.10: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ವಾಹನ ಗಳನ್ನು ಉಡುಪಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಪಡುಬಿದ್ರಿ ಪೇಟೆಯ ಕಾರ್ಕಳ ರಸ್ತೆಯಲ್ಲಿ ವಶಪಡಿಸಿಕೊಂಡಿದ್ದಾರೆ.

ಹಿರಿಯ ಭೂ ವಿಜ್ಞಾನಿ ಕೋದಂಡರಾಮಯ್ಯ ನೇತೃತ್ವದಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ತಪಾಸಣೆಗಾಗಿ ನಿಲ್ಲಿಸಿ ಪರಿಶೀಲಿಸಿದಾಗ ಯಾವುದೇ ಸಾಗಾಟ ಪರವಾನಿಗೆ ಇಲ್ಲದಿರುವುದು ಕಂಡುಬಂದಿದ್ದು, ಅದರಂತೆ 10 ಎಂ.ಟಿ ಮತ್ತು 06 ಎಂ.ಟಿ. ಮರಳು ಸಮೇತ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News