‘ನಿಮ್ಮ ದೂರು ನಮ್ಮ 100’
Update: 2017-06-10 23:00 IST
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರ ಪೊಲೀಸರಿಂದ ನಾಗರಿಕ ಸಬಲೀಕರಣ ಉಪಕ್ರಮ ತುರ್ತು ಸಮಯದಲ್ಲಿ ಪ್ರತಿಕ್ರಿಯಿಸುವ ‘ನಿಮ್ಮ ದೂರು ನಮ್ಮ 100’ ಸಹಾಯವಾಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ರೋಶನ್‌ಬೇಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತಿಖ್, ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ, ನಗರ ಪೊಲೀಸ್ ಆಯುಕ್ತ ಪ್ರವೀಣ್‌ಸೂದ್, ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಮತ್ತಿತರರು ಉಪಸ್ಥಿತರಿದ್ದರು.