×
Ad

ಫ್ರೆಂಚ್ ಓಪನ್: ಸತತ 10ನೆ ಬಾರಿ ನಡಾಲ್ ಫೈನಲ್‌ಗೆ

Update: 2017-06-10 23:17 IST

ಪ್ಯಾರಿಸ್, ಜೂ.10: ಒಂಬತ್ತು ಬಾರಿಯ ಚಾಂಪಿಯನ್ ರಫೆಲ್ ನಡಾಲ್ ಫ್ರೆಂಚ್ ಓಪನ್‌ನಲ್ಲಿ 10ನೆ ಬಾರಿ ಫೈನಲ್‌ಗೆ ಲಗ್ಗೆ ಇಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ರವಿವಾರ ನಡೆಯಲಿರುವ ಪ್ರಶಸ್ತಿ ಸುತ್ತಿನಲ್ಲಿ 2015ರ ಪ್ರಶಸ್ತಿ ವಿಜೇತ ಆಟಗಾರ ಸ್ವಿಸ್‌ನ ಸ್ಟಾನ್ ವಾವ್ರಿಂಕರನ್ನು ಎದುರಿಸಲಿದ್ದಾರೆ.

ಇಲ್ಲಿ ಶುಕ್ರವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್‌ನ ಎರಡನೆ ಸೆಮಿಫೈನಲ್ ಪಂದ್ಯದಲ್ಲಿ ಸ್ಪೇನ್‌ನ ನಡಾಲ್ ಆಸ್ಟ್ರೀಯದ ಡೊಮಿನಿಕ್ ಥೀಮ್‌ರನ್ನು 6-3, 6-4, 6-0 ನೇರ ಸೆಟ್‌ಗಳ ಅಂತರದಿಂದ ಮಣಿಸಿದರು. 2014ರ ಬಳಿಕ ಫ್ರೆಂಚ್ ಓಪನ್‌ನಲ್ಲಿ ಫೈನಲ್‌ಗೆ ತಲುಪಿದರು.

ವಾವ್ರಿಂಕ ಮೊದಲ ಸೆಮಿ ಫೈನಲ್‌ನಲ್ಲಿ ವಿಶ್ವದ ನಂ.1 ಆಟಗಾರ ಆ್ಯಂಡಿ ಮರ್ರೆಯವರನ್ನು 6-7(6/8), 6-3, 5-7, 7-6(7/3),6-1 ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿ 44 ವರ್ಷಗಳ ಬಳಿಕ ಪ್ಯಾರಿಸ್‌ನಲ್ಲಿ ಫೈನಲ್ ತಲುಪಿದ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ವಾವ್ರಿಂಕ ವಿರುದ್ಧ 15-3 ಹೆಡ್-ಟು-ಹೆಡ್ ದಾಖಲೆ ಹೊಂದಿರುವ ನಡಾಲ್ ಗ್ರಾನ್‌ಸ್ಲಾಮ್ ಟೂರ್ನಿಯೊಂದರಲ್ಲೇ 10 ಪ್ರಶಸ್ತಿಗಳನ್ನು ಜಯಿಸಿದ ವಿಶ್ವದ ಏಕೈಕ ಆಟಗಾರ ಎನಿಸಿಕೊಳ್ಳುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News