96ಗಂಟೆಗಳಲ್ಲಿ 13 ಭಯೋತ್ಪಾದಕರ ಹತ್ಯೆ
ಹೊಸದಿಲ್ಲಿ, ಜೂ.11:ಕಣಿವೆ ರಾಜ್ಯ ಕಾಶ್ಮೀರದಲ್ಲಿ 96 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸಲು ಪಾಕ್ ನಿಂದ ನುಸುಳಿದ 13 ಶಂಕಿತ ಭಯೋತ್ಪಾದಕರನ್ನು ಗಡಿ ನಿಯಂತ್ರಣಾ ರೇಖೆಯ ಬಳಿ ಭಾರತೀಯ ಸೇನೆ ಹೊಡೆದುರುಳಿಸಿದೆ.
ಗಡಿನಿಯಂತ್ರಣಾ ರೇಖೆಯ ಗುರೆಝ್, ಮಾಚಿಲ್, ನಾಗಮ್ ಮತ್ತು ಉರಿ ಸೆಕ್ಟರ್ ನಲ್ಲಿ ನಡೆಸಿದ ಕಾರ್ಯಾಚರಣೆಯ ವೇಳೆ ನುಸುಳುಕೋರರ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.
ಉರಿಯಲ್ಲಿ ಐವರು ಮತ್ತು ಗುರೆಝ್ ನಲ್ಲಿ ಓರ್ವ ಶಸ್ತ್ರಾಸ್ತ್ರಧಾರಿ ನುಸುಳುಕೋರರನ್ನು ಹತ್ಯೆ ಮಾಡಲಾಗಿದೆ. ಅವರಿಂದ ಶಸ್ತ್ರಾಸ್ತ್ರ, ಸ್ಫೋಟಕ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪವಿತ್ರ ರಮಝಾನ್ ತಿಂಗಳಲ್ಲಿ ಕಾಶ್ಮೀರದಲ್ಲಿ ಅಮಾಯಕರನ್ನು ಮತ್ತು ಭದ್ರತಾ ಪಡೆಯ ಸಿಬ್ಬಂದಿಗಳ ಹತ್ಯೆ ಮಾಡುವ ಉದ್ದೇಶಕ್ಕಾಗಿ ಪಾಕ್ ಉಗ್ರರರನ್ನು ಭಾರತಕ್ಕೆ ಕಳುಹಿಸಿದೆ ಎಂದು ಸೇನಾ ವಕ್ತಾರರೊಬ್ಬರು ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ವರ್ಷ 44 ಶಸ್ತ್ರಾಸ್ತ್ರಧಾರಿ ಉಗ್ರರನ್ನು ಕೊಲ್ಲಲಾಗಿದೆ ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ..