ಜೂ.14: ಸಿಎಂ ಅಭಿನಂದನಾ ಸಮಾರಂಭ; ಸಿದ್ದೇಶ್ ನಾಗೇಂದ್ರ

Update: 2017-06-11 12:17 GMT

ಹಾಸನ, ಜೂ. 11: ಬೆಂಗಳೂರಿನ ಶ್ರೀ ಕೃಷ್ಣ ವಿಹಾರ ಸಭಾಂಗಣದಲ್ಲಿ ಜೂ.14ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಅಖಿಲ ಭಾರತ ವೀರಶೈವ ಮಹಾಸಭಾದ ರಾರ್ಯಕಾರಣಿ ಸದಸ್ಯರು ಸಿದ್ದೇಶ್ ನಾಗೇಂದ್ರ ತಿಳಿಸಿದರು.

ನಗರದ ಶ್ರೀ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ಸಿಎಂಗೆ ಅಭಿನಂದನಾ ಸಮಾರಂಭದ ಪೂರ್ವಬಾವಿ ಸಭೆಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ಸರಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವ ಚಿತ್ರವನ್ನು ಹಾಕಲು ಸಂವಿಧಾನದಲ್ಲಿ ಅವಕಾಶ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಹಾಗೂ ಬಿಜಾಪುರದಲ್ಲಿ ಅಕ್ಕಮಹಾದೇವಿ ಹೆಸರನ್ನು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡಲು ಮುಂದಾಗಿರುವುದಕ್ಕೆ ಸ್ವಾಗತಿಸಿದರು.

ಜೊತೆಗೆ ಗುಲ್ಬರ್ಗದ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರು ಇಡುವುದಕ್ಕೆ ಪ್ರಸ್ಥಾಪ ನಡೆದಿದೆ ಎಂದರು. ಬಸವಣ್ಣನವರು ಒಂದು ವರ್ಗಕ್ಕೆ ಸಿಮೀತವಾಗಿಲ್ಲ. ಅವರು ಪ್ರತಿಯೊಬ್ಬರಿಗೂ ಅವಶ್ಯಕವಾಗಿರುವವರು. ಅವರ ಹಿಂದಿನ ವಚನಗಳು ಇಂದಿಗೂ ಕೂಡ ಎಲ್ಲಾರ ಮನದಲ್ಲಿ ಉಳಿದಿದೆ. ಈಗ ಎಲ್ಲಾ ಸರಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಹಾಕಲು ಸೂಚನೆ ನೀಡಿರುವುದು ಎಲ್ಲಾರಲ್ಲೂ ಸಂತೋಷ ತಂದಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಡೆಯುವ ಸಿಎಂ ಅಭಿನಂದನಾ ಸಮಾರಂಭಕ್ಕೆ ಜಿಲ್ಲೆಯಿಂದ ಒಂದು ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಹೋಬಳ್ಳಿ ಮಟ್ಟದಿಂದ ಸಮಾರಂಭಕ್ಕೆ ತೆರಳಿದ್ದಾರೆ. ಶ್ರೀ ಕೃಷ್ಣ ವಿಹಾರ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಶ್ರೀ ಸಿದ್ದಗಂಗಾ ಮಠದ ಕರ್ನಾಟಕ ರತ್ನ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿ, ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಮಾಜಿ ಸಚಿವರು ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವರು ಭೀಮಣ್ಣ ಖಂಡ್ರೆ, ಮಾಜಿ ಸಭಾಪತಿ ಎನ್. ತಿಪ್ಪಣ್ಣ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ದೊಡ್ಡಮಠದ ಮಠಾಧೀಶ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಸಲಹೆ ಸೂಚನೆಯನ್ನು ನೀಡಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಬಿ.ಎಸ್. ರೋಹಿತ್, ಉಪಾಧ್ಯಕ್ಷ ನಿಂಗರಾಜು, ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ರಾಜ್ಯ ಸಮಿತಿ ಸದಸ್ಯರು ಸಿದ್ದಯ್ಯ, ಮಹಿಳಾ ಘಟಕದ ಅಧ್ಯಕ್ಷರು ಸುಜಾತ, ಉಪಾಧ್ಯಕ್ಷೆ ಚಂದ್ರಕಲಾ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News