ಜೂ.13: ಜಾಗೃತಿ ಕಾರ್ಯಕ್ರಮ
Update: 2017-06-12 18:30 IST
ಮಂಗಳೂರು, ಜೂ.12: ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಬಾಲ್ಯ ವಿವಾಹ ತಡೆ ಮತ್ತು ಶಾಲೆ ಕಡೆ ನನ್ನ ನಡೆ ಜಾಗೃತಿ ಆಂದೋಲನ ಕಾರ್ಯಕ್ರಮವು ಜೂ.13ರಂದು ಬೆಳಗ್ಗೆ 9:30ಕ್ಕೆ ಜ್ಯೋತಿ-ಬಲ್ಮಠ ಸರಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ (ಪ್ರೌಢಶಾಲೆ ವಿಭಾಗ)ದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.