ಸಿಇಟಿ-ಕೆಇಎ ಪೂರ್ವ ಸಮಾಲೋಚನೆ
Update: 2017-06-12 21:01 IST
ಕಾರ್ಕಳ, ಜೂ.12: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವತಿಯಿಂದ ಸಿಇಟಿ-ಕೆಇಎ ಪೂರ್ವ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ಕಾರ್ಕಳದ ಶ್ರೀಭುವ ನೇಂದ್ರ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪಿ.ಶ್ರೀಧರ ಆಚಾರ್ಯ ಉದ್ಘಾಟಿಸಿದರು.
ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ಮುಖ್ಯಸ್ಥ ಪ್ರೊ.ವಾಸುದೇವ ಸಿಇಟಿ ಪ್ರವೇಶ ಪ್ರಕ್ರಿಯೆಯ ಸಮಗ್ರ ಮಾಹಿತಿ ನೀಡಿದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ರಂಜಿತ್ ಭಟ್ ಪಿಯುಸಿ ನಂತರದಲ್ಲಿ ತೆಗೆದುಕೊಳ್ಳಬಹುದಾದ ವಿವಿಧ ಕೋರ್ಸ್‌ಗಳು ಮತ್ತು ಆ ಮೂಲಕ ಭವಿಷ್ಯದಲ್ಲಿ ವೃತ್ತಿಪರರಾಗುವ ಅವಕಾಶಗಳ ಬಗ್ಗೆ ವಿವರಿಸಿದರು.
ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹಪ್ರಾಧ್ಯಾಪಕ ನಾಗರಾಜ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ರಾವ್ ವಂದಿಸಿದರು. ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ರಮ್ಯಶ್ರೀ ಮತ್ತು ಸೌಮ್ಯಾ ಭಟ್ ಕಾರ್ಯಕ್ರಮ ನಿರೂಪಿಸಿದರು.