ಸ್ವಚ್ಛತೆ ಕಾಪಾಡಿ; ರೋಗಗಳಿಂದ ಮುಕ್ತರಾಗಿ: ಮೀನಾಕ್ಷಿ ಬನ್ನಂಜೆ
ಉಡುಪಿ, ಜೂ.12: ಸಾರ್ವಜನಿಕರು ತಮ್ಮ ಮನೆಗಳಲ್ಲಿ ಮತ್ತು ಮನೆಯ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡುವ ಮೂಲಕ ಮಳೆಗಾಲದಲ್ಲಿ ಕಾಡುವ ವಿವಿಧ ರೋಗಗಳಿಂದ ಮುಕ್ತರಾಗುವಂತೆ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ತಿಳಿಸಿದ್ದಾರೆ.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್ ಮಲ್ಪೆ ಇವರ ಸಹಯೋಗದಲ್ಲಿ, ಪಡು ನಿಟ್ಟೂರಿನ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕವನ್ನು ಉದ್ಘಾಟಿಸಿ ಮಾತನಾಡುತಿದ್ದರು.
ಮಳೆಗಾಲದಲ್ಲಿ ಉಂಟಾಗುವ ಕೊಳಚೆ ಮತ್ತು ನಿಂತ ನೀರಿನಲ್ಲಿ ಸೊಳ್ಳೆ ಹಾಗೂ ನೊಣಗಳು ಉತ್ಪತ್ತಿಯಾಗಲಿದ್ದು ಇದರಿಂದ 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಬೇಧಿ ಹಾಗೂ ಡೆಂಗ್‌ನಂಥ ರೋಗಗಳು ಕಂಡು ಬರುತ್ತವೆ. ಆದ್ದರಿಂದ ಮನೆಯ ಆವರಣದಲ್ಲಿ ಮತ್ತು ಮನೆಯ ಒಳಗೆ ಸ್ವಚ್ಛತೆ ಕಾಪಾಡು ವಂತೆ ಅವರು ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಮಾತನಾಡಿ, ಜಿಲ್ಲೆಯಲ್ಲಿ 5ವರ್ಷದೊಳಗಿನ 78,419 ಮನೆಗಳನ್ನು ಗುರುತಿಸಲಾಗಿದ್ದು, ಈ ಎಲ್ಲಾ ಮನೆಗಳಿಗೆ ಇಂದಿನಿಂದ ಜೂ.24ರವರೆಗೆ ಆಚರಿಸಲಾಗುವ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕದ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು, ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಓಆರ್‌ಎಸ್ ಪಾಕೆಟ್ ವಿತರಿಸಲಿದ್ದಾರೆ ಎಂದರು.
ಭೇಟಿ ಸಂದರ್ಭದಲ್ಲಿ ಮನೆಯಲ್ಲಿ ಬೇಧಿಯಿಂದ ನರಳುವ ಮಕ್ಕಳು ಕಂಡುಬಂದಲ್ಲಿ ಜಿಂಕ್ ಮಾತ್ರೆಯನ್ನು ವಿತರಿಸಲಿದ್ದಾರೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಮಾತನಾಡಿ, ಜಿಲ್ಲೆಯಲ್ಲಿ 5ವರ್ಷದೊಳಗಿನ 78,419 ಮನೆಗಳನ್ನು ಗುರುತಿಸಲಾಗಿದ್ದು, ಈ ಎಲ್ಲಾ ಮನೆಗಳಿಗೆ ಇಂದಿನಿಂದ ಜೂ.24ರವರೆಗೆ ಆಚರಿಸಲಾಗುವ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕದ ಸಂದರ್ದಲ್ಲಿ ಆರೋಗ್ಯ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಒಆರ್‌ಎಸ್ ಪಾಕೆಟ್ ವಿತರಿಸಲಿದ್ದಾರೆ ಎಂದರು. ಈ ಸಂದರ್ಭ ಮನೆಯಲ್ಲಿ ಬೇಧಿಯಿಂದ ನರಳುವ ಮಕ್ಕಳು ಕಂಡುಬಂದಲ್ಲಿ ಜಿಂಕ್ ಮಾತ್ರೆಯನ್ನು ವಿತರಿಸಲಿದ್ದಾರೆ ಎಂದರು. ಮಳೆಗಾಲದಲ್ಲಿ ಮಕ್ಕಳಲ್ಲಿ ಬೇಧಿ ಪ್ರಕರಣ ಹೆಚ್ಚು ಕಂಡುಬರಲಿದ್ದು, ಮನೆಯ ಸುತ್ತಮುತ್ತ ನೊಣಗಳು ಉತ್ಪತ್ತಿಯಾಗದಂತೆ ಸ್ವಚ್ಚತೆ ಕಾಪಾಡಬೇಕು. ಸ್ವಚ್ಛತೆಯ ಬಗ್ಗೆ ಮತ್ತು ಚೆನ್ನಾಗಿ ಕೈತೊಳೆಯುವುದಕ್ಕೆ ಆದ್ಯತೆ ನೀಡಬೇಕು ಎಂದು ಡಾ.ರೋಹಿಣಿ ತಿಳಿಸಿದರು.
ಒಆರ್‌ಎಸ್ ದ್ರಾವಣ ತಯಾರಿಸುವ ಹಾಗೂ ಕೈ ತೊಳೆಯುವ ವಿಧಾನದ ಬಗ್ಗೆ ಡಾ.ಈಶ್ವರಿ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯೆ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರೋಟರಿಯ ಅಧ್ಯಕ್ಷ ಡಾ.ಸುರೇಶ್ ಶೆಣ್ಯೆ, ಆರ್‌ಸಿಹೆಚ್ ಅಧಿಕಾರಿ ಡಾ. ರಾಮ, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ, ಡಾ. ದೀಕ್ಷಾ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ತಲ್ಲೂರು ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು.