ಬಂಟ್ವಾಳ ಯುವ ಕಾಂಗ್ರೆಸ್ ವತಿಯಿಂದ ನವೀನ್ ಭಟ್‌ರಿಗೆ ಸನ್ಮಾನ
Update: 2017-06-12 23:07 IST
ಬಂಟ್ವಾಳ, ಜೂ. 12: ಬಂಟ್ವಾಳ ಯುವ ಕಾಂಗ್ರೆಸ್ ವತಿಯಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ 37ನೆ ರ್ಯಾಂಕ್‌ಗಳಿಸಿದ ನವೀನ್ ಭಟ್‌ರನ್ನು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನವೀನ್ ಭಟ್‌ರ ತಂದೆ ಪಿಡಬ್ಲ್ಯುಡಿ ಎಂಜಿನಿಯರ್ ಉಮೇಶ್ ಭಟ್, ಬಂಟ್ವಾಳ ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಂದಾವರ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೇದ್ ಅಖ್ತಾರ್ ಮೊದಲಾದವರು ಉಪಸ್ಥಿತರಿದ್ದರು.