ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

Update: 2017-06-13 08:51 GMT

 ಬೆಂಗಳೂರು, ಜೂ.13: ಹತ್ತು ವರ್ಷಗಳ ಹಳೆಯ ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಎಸ್‌ಐಟಿ ವಿಶೇಷ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬಂಧನ ಭೀತಿ ಎದುರಿಸುತ್ತಿದ್ದಾರೆ.

ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಕುಮಾರ ಸ್ವಾಮಿಗೆ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಎಸ್‌ಐಟಿ ವಿಶೇಷ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News