ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ
Update: 2017-06-13 19:42 IST
ಉಡುಪಿ,ಜೂ.13: ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಜು.24ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ, ಉಡುಪಿ-576102 ಈ ವಿಳಾಸಕ್ಕೆ ಕಳುಹಿಸಿಕೊಡಬಹುದು.
ಹೆಟ್ಟಿನ ಮಾಹಿತಿಗೆ ದೂರವಾಣಿ: (0820) 2570263ನ್ನು ಸಂಪರ್ಕಿಸಬಹುದು. ಈ ಹಿಂದೆ ತರಬೇತಿಗಾಗಿ ಅರ್ಜಿ ಸಲ್ಲಿಸಿ ಅವಕಾಶ ಸಿಗದವರು ಸಹ ಇನ್ನೊಮ್ಮೆ ಅರ್ಜಿ ಸಲ್ಲಿಸಬಹುದು ಎಂದು ಭಾರತೀಯ ವಿಕಾಸ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.