‘ಉಚಿತ ಶಿಕ್ಷಣ-ಉಚಿತ ಪ್ರಯಾಣ’ಕ್ಕೆ ಒತ್ತಾಯಿಸಿ ಎಸ್‌ಎಫ್‌ಐ ಹೋರಾಟ

Update: 2017-06-13 14:53 GMT

ಬೆಂಗಳೂರು, ಜೂ. 13: ‘ಉಚಿತ ಶಿಕ್ಷಣ-ಉಚಿತ ಪ್ರಯಾಣ’(ಬಸ್ ಪಾಸ್)ಕ್ಕೆ ಒತ್ತಾಯಿಸಿ ಎಸ್‌ಎಫ್‌ಐ ರಾಜ್ಯಾದ್ಯಂತ ಹೋರಾಟ, ಪ್ರಚಾರಾಂದೋಲನ ಅಭಿಯಾನವನ್ನು ಜೂನ್‌ನಿಂದ ಜುಲೈ ವರೆಗೆ ಹಮ್ಮಿಕೊಳ್ಳಲು ನಿರ್ಧರಿಸಿದೆ.

ರಾಜ್ಯದಲ್ಲಿ ಬರಗಾಲವಿದ್ದು, ಆರ್ಥಿಕ ಮುಗ್ಗಟ್ಟಿನಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಬೇರೆ ಜಿಲ್ಲೆ ಸೇರಿದಂತೆ ಇತರೆ ರಾಜ್ಯಗಳಿಗೆ ವಿದ್ಯಾರ್ಥಿಗಳು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದು, ರಾಜ್ಯದಲ್ಲಿ ಪ್ರಯಾಣದರ ಇತರೆ ರಾಜ್ಯಗಳಿಗಿಂತ ಹೆಚ್ಚಿದೆ. ಹೀಗಾಗಿ ಕೇರಳ ಮತ್ತು ತಮಿಳುನಾಡು ಮಾದರಿಯಲ್ಲೆ ಉನ್ನತ ಶಿಕ್ಷಣದವರೆಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಮೊದಲ ಹಂತದಲ್ಲಿ ತಾಲೂಕು ಮಟ್ಟದಲ್ಲಿ, ಎರಡನೆ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ, ಮೂರನೆ ಹಂತವಾಗಿ ಜುಲೈ ಕೊನೆ ವಾರದಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಹೋರಾಟ ರೂಪಿಸಲಾಗುವುದು ಎಂದು ಎಸ್‌ಎಫ್‌ಐ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News