30 ವರ್ಷಗಳ ಹಿಂದೆ ಅಪ್ರಾಪ್ತೆಯ ಕಿಡ್ನಾಪ್: ಆರೋಪಿ ಸೆರೆ
Update: 2017-06-13 20:46 IST
ಮುಂಡಗೋಡ, ಜೂ.13: ಸುಮಾರು ಮೂವತ್ತು ವರ್ಷಗಳ ಹಿಂದೆ ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಮುಂಡಗೋಡ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರಪಡಿಸಿದ್ದಾರೆ.
30 ವರ್ಷಗಳಿಂದ ನಾಪತ್ತೆಯಾಗಿದ್ದ ತಮಿಳನಾಡಿನ ಮಾದಪ್ಪ ಕೊಂಡಯ್ಯ (50) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತಿಚಿಗೆ ಪೊಲೀಸರು ಅದೇ ಹೆಸರಿನ ವ್ಯಕ್ತಿಯೋರ್ವನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಆತ ಈ ಪ್ರಕರಣದ ಆರೋಪಿಯಲ್ಲಾ ಎಂದು ತಿಳಿದು ಆತನನ್ನು ವಾಪಸ್ ಕಳುಹಿಸಿದ್ದರು. ನಂತರ ಆರೋಪಿ ಆಂಧ್ರಪ್ರದೇಶದಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.