ಪೌರ ಕಾರ್ಮಿಕರನ್ನು ದಾರಿ ತಪ್ಪಿಸುತ್ತಿರುವ ನಾರಾಯಣ: ಆರೋಪ
ಬೆಂಗಳೂರು, ಜೂ.13: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಕಾರದ ವಿರುದ್ಧ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ನಾರಾಯಣ ಅವರು ತಪ್ಪುಮಾಹಿತಿ ನೀಡಿ, ಪೌರ ಕಾರ್ಮಿಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪೌರಕಾರ್ಮಿಕರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಶೋಕ ಸಾಲಪ್ಪ ಆರೋಪಿಸಿದ್ದಾರೆ.
ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಪೌರಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ನಾರಾಯಣ ಪೌರಕಾರ್ಮಿಕರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ದೂರಿದರು.
ಗುತ್ತಿಗೆ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸ್ವತಃ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿದ್ದಾರೆ. ಅಷ್ಟೇ ಅಲ್ಲದೆ ಈ ಹಿಂದೆ ನೀಡುತ್ತಿದೆ 7 ಸಾವಿರ ಕನಿಷ್ಠ ವೇತನವನ್ನು 14 ಸಾವಿರಕ್ಕೆ ಹೆಚ್ಚಿಸಿದ್ದಾರೆ. ದೇಶದಲ್ಲಿಯೇ ಮೊದಲ ಬಾರಿಗೆ ಪೌರಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡರು.