×
Ad

ಮೆಟ್ರೋಗೆ ಬಸವೇಶ್ವರರ ಹೆಸರಿಡಲು ಆಗ್ರಹ

Update: 2017-06-13 22:37 IST

ಬೆಂಗಳೂರು, ಜೂ.13: ನಮ್ಮ ಮೆಟ್ರೋಗೆ ಬಸವೇಶ್ವರರ ಹೆಸರನ್ನು ನಾಮಕರಣ ಮಾಡಬೇಕು ಎಂದು ವೀರಶೈವ ಲಿಂಗಾಯತ ಒಕ್ಕೂಟದ ಅಧ್ಯಕ್ಷ ಬಿ.ಜಿ. ಜ್ಯೋತಿಪ್ರಕಾಶ್ ಮಿರ್ಜಿ ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿರುವ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ, ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಕೆಂಪೇಗೌಡ ಅವರು ಹೆಸರನ್ನು ಇಡಲಾಗಿದೆ. ಸಿಟಿ ರೈಲ್ವೆ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಹೆಸರನ್ನಿಟ್ಟು ಅವರಿಗೆ ಗೌರವ ಸಲ್ಲಿಸಿದೆ. ಅದರಂತೆ 12ನೆ ಶತಮಾನದಲ್ಲಿಯೇ ಸಮಾನತೆ ಸಾರಿದ ವಿಶ್ವಗುರು ಬಸವೇಶ್ವರ ಅವರ ಹೆಸರನ್ನು ಬೆಂಗಳೂರು ಮೆಟ್ರೋಕ್ಕೆ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.

ವಚನಕಾರ ಬಸವೇಶ್ವರ ಅವರ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ಸ್ಥಾಪನೆ ಮಾಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿದ ಅವರು, ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಬಸ್ ಪಾಸ್‌ಯನ್ನು ಆರ್ಥಿಕವಾಗಿ ಹಿಂದುಳಿದ ಎಲ್ಲ ಸಮುದಾಯ ವರ್ಗಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News