ಕಾರು - ಬಸ್ ಢಿಕ್ಕಿ: ನಾಲ್ವರಿಗೆ ಗಂಭೀರ ಗಾಯ
Update: 2017-06-14 18:48 IST
ಶಿವಮೊಗ್ಗ, ಜೂ. 14: ಬಸ್ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಸಹಿತ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಹೊರವಲಯ ತ್ಯಾಗರ್ತಿ ಸಮೀಪದ ಬುಧವಾರ ವರದಿಯಾಗಿದೆ.
ಶಿವಮೊಗ್ಗದೆಡೆಯಿಂದ ಸಾಗರದೆಡೆಗೆ ಹೋಗುವ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರು ಕೇರಳ ರಾಜ್ಯದವರು ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು ಐದಾರು ಮಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಸಾಗರ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು, ತನಿಖೆ ಮುಂದುವರಿಸಿದ್ದಾರೆ.