ಬಾಲ್ಯ ವಿವಾಹ ವಿರೋಧಿ ಶಿಬಿರ
ಮೂಡುಬಿದಿರೆ, ಜೂ.13:ಸರಕಾರಿ ಸಂಯುಕ್ತ ಪ್ರೌಢಶಾಲೆ ಪ್ರಾಂತ್ಯ, ಮೂಡಬಿದ್ರೆ ಇಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆನಮ್ಮ ನಡೆ- ಶಾಲೆ ಕಡೆ ಎಂಬ ಕಾರ್ಯಕ್ರಮದಡಿಯಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಬಗ್ಗೆ ಮಾಹಿತಿ ಶಿಬಿರ ನಡೆಯಿತು.
ದ.ಕ ಜಿಲ್ಲಾ ಸಿವಿಲ್ ನ್ಯಾಯಾಧೀಶರೂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನ ಗೌಡ ಅವರು ದೀಪ ಬೆಳಗಿ ಉದ್ಘಾಟನೆ ಮಾಡಿ, ವಿದ್ಯಾರ್ಥಿಗಳಿಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮೂಬಿದ್ರೆಯ ವಕೀಲೆ, ನೋಟರಿ ಶ್ವೇತ ಜೈನ್‌ರವರು ಸಂಪನ್ಮೂಲ ವ್ಯಕ್ತಿಯಾಗಿ ಬಾಲ್ಯವಿವಾಹದಿಂದಾಗುವ ತೊಂದರೆಗಳು, ಕಾನೂನಿನಡಿಯಲ್ಲಿ ಅದಕ್ಕಿರುವ ಶಿಕ್ಷೆಗಳು, ಅದಕ್ಕಿರುವ ಕಾರಣಗಳು ಮತ್ತು ವಿದ್ಯಾರ್ಥಿಗಳಾಗಿ ತಡೆಗಟ್ಟುವ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆದರು.
ಸಿವಿಲ್ ನ್ಯಾಯಾಧೀಶರಾದ ಅರುಣಾ ಕುಮಾರಿ ಎ. ಮತ್ತು ಮೂಡಬಿದ್ರೆಯ ವಕೀಲರ ಸಂಘದ ಅಧ್ಯಕ್ಷರಾದ ಬಾಹುಬಲಿ ಪ್ರಸಾದ್ ಎಂ. ಸಂದರ್ಭೋಚಿತವಾಗಿ ಮಾತನಾಡಿದರು.
ವೇದಿಕೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾದ ನಾಗೇಶ ಶೆಟ್ಟಿ, ನ್ಯಾಯವಾದಿಗಳಾದ ಶ್ರೀಮತಿ ಮಾಧುರಿ ಕುಲಕರ್ಣಿ ಮತ್ತು ಶ್ರೀಮತಿ ಗೌರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆ್ಯಂಟನಿ ಬ್ಯಾಪ್ಟಿಸ್ಟ್ ಕುಟಿನ್ಹೊ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಶಿವಾನಂದ ಕಾಯ್ಕಿಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ನಾಗರತ್ನ, ಶ್ರೀಮತಿ ರತಿ, ಕುಭಾರತಿ, ಮಕ್ಕಳ ರಕ್ಷಣಾ ಘಟಕದ ಕಾರ್ಯಕರ್ತರಾದ ಶ್ರೀಮತಿ ಪ್ರತಿಮಾ, ಕುಮಾರ್, ಶ್ರೀ ಪ್ರಸನ್ನ ಇವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರಾಜಶ್ರೀ ಬಿ. ಸ್ವಾಗತಿಸಿದರು. ಶಾಲಾ ಶಿಕ್ಷಕರಾದ ಗಣೇಶ್‌ರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಾನಾರ್ಪಣೆಗೈದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.