ಆರ್‌ಟಿಇ ಮಕ್ಕಳಿಗೆ ಸಮೀಪದ ಶಾಲೆಗಳಲ್ಲಿ ಪ್ರವೇಶ: ಸಚಿವ ತನ್ವೀರ್ ಸೇಠ್

Update: 2017-06-14 14:29 GMT

 ಬೆಂಗಳೂರು, ಜೂ. 14: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಯಡಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಕಲಿಯುತ್ತಿದ್ದ ಶಾಲೆಗಳು ಕಾರಣಾಂತರಗಳಿಂದ ಮುಚ್ಚಿದ ಸಂದರ್ಭದಲ್ಲಿ ಅವರಿಗೆ ಹತ್ತಿರದ ಸರಕಾರಿ ಅಥವಾ ಖಾಸಗಿ ಅನುದಾನಿತ ಶಾಲೆಯಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ರವಿಸುಬ್ರಹ್ಮಣ್ಯ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹೊಸ ಖಾಸಗಿ ಶಾಲೆಗಳ ಮಾನದಂಡಗಳನ್ವಯ ಅರ್ಧ ಎಕರೆಗಿಂತ ಕಡಿಮೆ ವಿಸ್ತೀರ್ಣ, ಆಟದ ಮೈದಾನ ಹಾಗೂ ಮಕ್ಕಳ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಶಾಲೆಗಳನ್ನು ಮುಚ್ಚಿಸಲಾಗುತ್ತದೆ ಎಂದರು.

 ಬೆಂಗಳೂರು ನಗರದಲ್ಲಿ ಇಂತಹ ಏಳು ಶಾಲೆಗಳನ್ನು ಮುಚ್ಚಲಾಗಿದೆ. ಆದರೆ, ಆ ಶಾಲೆಗಳಲ್ಲಿ ಆರ್‌ಟಿಇ ಕಾಯ್ದೆಯಡಿ ಪ್ರವೇಶ ಪಡೆದ ಮಕ್ಕಳಿಗೆ ಮತ್ತೊಂದು ಖಾಸಗಿ ಶಾಲೆಗೆ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ಇಲ್ಲ ಎಂದು ತನ್ವೀರ್ ಸೇಠ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News