ಜಿಂಕೆಯ ಚರ್ಮ ಸಾಗಾಟ: ಆರೋಪಿಗಳ ಸೆರೆ
Update: 2017-06-14 21:17 IST
ಬೆಳ್ತಂಗಡಿ, ಜೂ. 14: ಜಿಂಕೆಯ ಚರ್ಮವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಪುತ್ತೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಧರ್ಮಸ್ಥಳ ಸಮೀಪ ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಣ್ಣಪ್ಪ (27) ಮತ್ತು ದೇವರಾಜ್ ಎಚ್ (25) ಬಂಧಿತರು ಎಂದು ಗುರುತಿಸಲಾಗಿದೆ.
ಇವರಿಬ್ಬರು ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಕಾರಿನಲ್ಲಿ ತಿರುಗಾಡುತ್ತಿದ್ದರು ಎನ್ನಲಾಗಿದ್ದು, ವಿಚಾರಣೆ ನಡೆಸಿದ ಸಂದರ್ಭ ಜಿಂಕೆಯ ಚರ್ಮ ಮಾರಾಟ ಮಾಡಲು ಯತ್ನಿಸಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನ ಮತ್ತು ಜಿಂಕೆಯ ಚರ್ಮದೊಂದಿಗೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.