ಎಚ್‌ಡಿಕೆ ವಿರುದ್ಧದ ಜಂತಕಲ್ ಮೈನಿಂಗ್ ಪ್ರಕರಣ : ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Update: 2017-06-14 16:05 GMT

ಬೆಂಗಳೂರು, ಜೂ.14: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದ ಮೂರನೆ ಆರೋಪಿ ಎಚ್.ಡಿ.ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ಕೈಗೆತ್ತಿಕೊಳ್ಳಲು ಕೋರಿ ಹೈಕೋರ್ಟ್ ನ್ಯಾಯಮೂರ್ತಿ ರತ್ನಕಲಾ ಅವರ ನ್ಯಾಯಪೀಠಕ್ಕೆ ಜ್ಞಾಪನಾ ಪತ್ರ ಸಲ್ಲಿಸಲಾಯಿತು.

ಜ್ಞಾಪನಾ ಪತ್ರ ಸ್ವೀಕರಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸುವುದಾಗಿ ತಿಳಿಸಿತು.

ಈ ಮುಂಚೆ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಬೆಂಗಳೂರಿನ ವಿಶೇಷ ಕೋರ್ಟ್ ವಜಾಗೊಳಿಸಿದ್ದರಿಂದ ಆತಂಕಗೊಂಡಿದ್ದ ಕುಮಾರಸ್ವಾಮಿ ಅವರು ಈಗ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಕ್ರಮ ಗಣಿಕಾರಿಕೆ ಪ್ರಕರಣ ಸಂಬಂಧ ಎಚ್.ಡಿ.ಕುಮಾರಸ್ವಾಮಿ ಅವರು ಜಂತಕಲ್ ಮೈನಿಂಗ್ ಕಂಪೆನಿಯಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಕುಮಾರಸ್ವಾಮಿ ಅವರು ತಮ್ಮ ವಕೀಲ ಹಷ್ಮತ್ ಪಾಷಾ ಅವರ ಮೂಲಕ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News