ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ
Update: 2017-06-14 21:57 IST
ಜಮ್ಮು, ಜೂ.14 : ಜಮ್ಮು-ಕಾಶ್ಮೀರದ ರಜೌರಿ ಮತ್ತು ಪೂಂಛ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಪಡೆಗಳು ಭಾರತದ ಸೇನಾನೆಲೆ ಮತ್ತು ನಾಗರಿಕರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದೆ.
ಸ್ವಯಂಚಾಲಿತ ಆರ್‌ಪಿಜಿ ಮತ್ತು ರೈಫಲ್‌ಗಳಿಂದ ಪಾಕ್ ಪಡೆಗಳು ದಾಳಿ ನಡೆಸಿದ್ದು ಇದಕ್ಕೆ ಭಾರತೀಯ ಪಡೆಗಳು ಸೂಕ್ತ ಪ್ರತ್ಯುತ್ತರ ನೀಡಿವೆ ಎಂದು ಸೇನೆಯ ವಕ್ತಾರರು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ ಪಾಕ್ ಒಂಬತ್ತು ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಅವರು ತಿಳಿಸಿದ್ದಾರೆ.