×
Ad

ಕ್ರೀಡಾಪಟುಗಳಿಗೆ ‘ಗ್ರೇಸ್ ಮಾರ್ಕ್ಸ್’ ಪರಿಶೀಲನೆಯಲ್ಲಿ: ಪ್ರಮೋದ್ ಮಧ್ವರಾಜ್

Update: 2017-06-15 17:15 IST

ಮಂಗಳೂರು, ಜೂ.15: ರಾಜ್ಯದಿಂದ ರಾಜ್ಯ ಮತ್ತು ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ‘ಗ್ರೇಸ್ ಮಾರ್ಕ್ಸ್’ ನೀಡಬೇಕು ಎಂಬ ಬೇಡಿಕೆಯನ್ನು ಇಲಾಖೆಯು ರೂಪಿಸಿರುವ ಕರಡು ರಾಜ್ಯ ಕ್ರೀಡಾ ನೀತಿಯಲ್ಲಿ ಅಳವಡಿಸಲಾಗಿರುತ್ತದೆ. ಈ ಕರಡು ಕ್ರೀಡಾ ನೀತಿಯು ಸರಕಾರದ ಪರಿಶೀಲನೆಯಲ್ಲಿದೆ ಎಂದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ರಾಜ್ಯ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಮಂಗಳೂರು  ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಸ್ಥಾಪಿಸಲು ಉದ್ದೇಶಿಸಲಾಗಿದೆಯೇ? ಉದ್ದೇಶಿದ್ದಲ್ಲಿ ಅದು ಯಾವ ಹಂತದಲ್ಲಿದೆ? ವಿಳಂಬಕ್ಕೆ ಕಾರಣಗಳೇನು? ಎಷ್ಟು ಅನುದಾನ ಮೀಸಲಿಡಲಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಕಾಮಗಾರಿ ಕೈಗೊಳ್ಳಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ಲೋಕೋಪಯೋಗಿ ಇಲಾಖೆಯು ಅಂದಾಜು ಪಟ್ಟಿಗೆ ತಾಂತ್ರಿಕ ಅನುಮೋದನೆ ಪಡೆದು ನಿಯಮಾನುಸಾರ ಟೆಂಡರ್ ಪ್ರಕ್ರಿಯೆ ಕೈಗೊಂಡಿರುವುದರಿಂದ ಕಾಮಗಾರಿ ವಿಳಂಬವಾಗಲು ಕಾರಣವಾಗಿದೆ. 499.88 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳವನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಪ್ರಸ್ತುತ 1,67,85,716 ಲಕ್ಷ ರೂ.ವನ್ನು ಮೀಸಲಿಡಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News