ಉ.ಪ್ರ: ಸಮುದಾಯಗಳ ನಡುವೆ ಘರ್ಷಣೆ,ಇಬ್ಬರಿಗೆ ಗಾಯ

Update: 2017-06-15 12:05 GMT

ಮುಝಫರ್‌ನಗರ,ಜೂ.15: ಜಿಲ್ಲೆಯ ಲಾತ್ಕಾ ಗ್ರಾಮದಲ್ಲಿ ಭೂವಿವಾದಕ್ಕೆ ಸಂಬಂಧಿ ಸಿದಂತೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಬುಧವಾರ ಭೂವಿವಾದಕ್ಕೆ ಸಂಬಂಧಿಸಿದಂತೆ ವಿಭಿನ್ನ ಸಮುದಾಯಗಳಿಗೆ ಸೇರಿದ ಇಬ್ಬರು ವ್ಯಕ್ತಿಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಎರಡೂ ಗುಂಪುಗಳ ಜನರು ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದರು.

 ತಲೆಮರೆಸಿಕೊಂಡಿರುವ ಐವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ. ಗ್ರಾಮದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News