×
Ad

ಜೂ.16: ಎಸ್ ಐ ಒ ನಿಂದ ಕೊಯಿಲ ಎಂಡೋಸಲ್ಫಾನ್ ಪಾಲನಾ ಕೇಂದ್ರದಲ್ಲಿ ಇಫ್ತಾರ್ ಕೂಟ

Update: 2017-06-15 17:40 IST

ಬಂಟ್ವಾಳ, ಜೂ. 15: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ (ಎಸ್ ಐ ಒ) ನ ‘ಹಲವು ಧರ್ಮಗಳು: ಒಂದು ಭಾರತ’ ವಾರ್ಷಿಕ ಸಹೋದರತಾ ಅಭಿಯಾನದ ಪ್ರಯುಕ್ತ ಉಪ್ಪಿನಂಗಡಿಯ ಕೊಯಿಲ ಎಂಡೋಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರದಲ್ಲಿ ಜೂ.16 ರಂದು ಸಂಜೆ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ.

ಎಸ್ ಐ ಒ  ಪಾಣೆಮಂಗಳೂರು ಮತ್ತು ಉಪ್ಪಿನಂಗಡಿಯ ಜಂಟಿ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೇತ್ರಾವತಿ ಉಳಿಸಿ ಹೋರಾಟ ಸಮಿತಿಯ ಮುಖಂಡರಾದ ಡಾ. ನಿರಂಜನ್ ರೈ, ಆತೂರು ಆಯಿಷಾ ಎಜುಕೇಶನಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ  ಅಮೀನ್ ಅಹ್ಸನ್, ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ  ಕರುಣಾಕರ್, ಎಂ.ಫ್ರೆಂಡ್ಸ್ ಟ್ರಸ್ಟ್ ನ ಕಾರ್ಯದರ್ಶಿ ರಶೀದ್ ವಿಟ್ಲ ಹಾಗೂ ಎಸ್ ಐ ಒ ದ.ಕ. ಜಿಲ್ಲಾ ಕಾರ್ಯದರ್ಶಿ ಬಾಸಿತ್ ಉಪ್ಪಿನಂಗಡಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ (ಎಸ್ ಐ ಒ) ದ.ಕ. ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News