×
Ad

ರಸ್ತೆ ಅಪಘಾತ: ಸ್ಕೂಟರ್ ಸವಾರ ಮೃತ್ಯು

Update: 2017-06-15 18:14 IST

ಮಡಿಕೇರಿ, ಜೂ.15: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಸಮೀಪದ ಕಡಗದಾಳುವಿನಲ್ಲಿ ನಡೆದಿದೆ.

ಸಿದ್ದಾಪುರದ ಕಡೆಯಿಂದ ಮಡಿಕೇರಿಗೆ ಸ್ಕೂಟರ್‌ನಲ್ಲಿ ಬರುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಮೂರ್ನಾಡು ನಿವಾಸಿ ಲಿಂಗಪ್ಪ (50) ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸ್ಕೂಟರ್ ಚಾಲಕ ತನುತಮ್ಮಯ್ಯ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸ ಲಾಗಿದೆ. ಕಡಗದಾಳು ಬಳಿ ಖಾಸಗಿ ಬಸ್ ಹಿಂದಿಕ್ಕಿ ಮುನ್ನುಗ್ಗುವ ಸಂದರ್ಭ ಸ್ಕೂಟರ್ ಬಸ್‌ಗೆ ಢಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News