×
Ad

ವಾಹನ ಚಾಲಕರ ಸಂಘದ ಮಹಾಸಭೆ

Update: 2017-06-15 20:58 IST

ಮಂಗಳೂರು, ಜೂ.15: ರಾಜ್ಯ ಸರಕಾರಿ ವಾಹನ ಚಾಲಕರ ಸಂಘದ 2016-17ನೆ ಸಾಲಿನ ವಾರ್ಷಿಕ ಮಹಾಸಭೆಯು ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ದೇವದಾಸ್‌ರ ಅಧ್ಯಕ್ಷತೆಯಲ್ಲಿ ಜರಗಿತು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ನವೀನ್ ಕುಮಾರ್, ಲೆಕ್ಕಪತ್ರವನ್ನು ಅಬ್ದುಲ್ ಕರಿಂ ಮಂಡಿಸಿದರು. ಈ ಸಂದರ್ಭ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಪದೋನ್ನತಿ ಹೊಂದಿರುವ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದ ಮುಹಮ್ಮದ್ ರಫೀಕ್‌ರನ್ನು ಸನ್ಮಾನಿಸಲಾಯಿತು.

ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಅಧ್ಯಕ್ಷ ಮೌರಿಸ್ ಮಸ್ಕರೇನ್ಹಸ್, ತಾಲೂಕು ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷರಾದ ಸೀತಾರಾಮ ಗೌಡ, ಪುಟ್ಟಣ್ಣ, ರಝಾಕ್, ದಯಾನಂದ ಹಾಗೂ ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ಫ್ರಾಂಕಿ ಫ್ರಾನ್ಸಿಸ್ ಕುಟಿನ್ಹ, ಗೌರವ ಅಧ್ಯಕ್ಷ ಸುಂದರ, ಸಂಘಟನಾ ಕಾರ್ಯದರ್ಶಿ ಸಿರಿಲ್ ರಾಬರ್ಟ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News