×
Ad

ಸೊರಬ: ಮುಸ್ಲಿಂ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

Update: 2017-06-16 17:33 IST

ಸೊರಬ,ಜೂ.16: ತಾಲ್ಲೂಕಿನಲ್ಲಿ ಮುಸ್ಲಿಂ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು, ಉದ್ಘಾಟನಾ ಕಾರ್ಯಕ್ರಮವನ್ನು ಶಿಘ್ರದಲ್ಲಿಯೇ ಹಮ್ಮಿಕೊಳ್ಳಲಾಗುವುದು ಎಂದು ಸಮಿತಿಯ ತಾಲೂಕು  ಅಧ್ಯಕ್ಷ ಕೆ.ಎ.ಸೈಯದ್ ಅಹಮದ್ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಸ್ಲಿಂ ಹಿತರಕ್ಷಣಾ ಸಮಿತಿಯ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿ, ಮುಸ್ಲಿಂ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ ಅದಕ್ಕೆ ಸಕಾರಾತ್ಮಕ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಸಮಾಜದ ವಯೋವೃದ್ದರು, ಮಹಿಳೆಯರು, ಬಡಮಕ್ಕಳು, ಅಂಗವಿಕಲರಿಗೆ ವಿಶೇಷ ಆದ್ಯತೆ ಮೇರೆಗೆ ಸಹಾಯ ಕಲ್ಪಿಸುವ ಜೊತೆಗೆ ಕಾನೂನು ಬದ್ಧ ದಾಖಲೆಗಳಿಲ್ಲದ ಖಬರ್ ಸ್ಥಾನ ಜಾಗಗಳು ಹಾಗು ಸಮಾಜದ ಇತರೆ ದಾಖಲೆಗಳನ್ನು ಸರಿಪಡಿಸುವುದು, ಸರ್ಕಾರದ ಸವಲತ್ತುಗಳು ಕೆಲವೇ ಕೆಲವು ಜನರಿಗೆ ಮಾತ್ರ ತಲುಪುತ್ತಿದ್ದು, ಅರ್ಹ ಫಲಾನುಭವಿಗಳು ಇದರಿಂದ ವಂಚಿತರಾಗಾಗದಂತೆ ನ್ಯಾಯ ದೊರಕಿಸುವುದು, ಸಮಾಜದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೂರಕವಾಗಿ ಜಾಗೃತಿ ಮೂಡಿಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News