ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2017-06-16 14:05 GMT

ಬೆಂಗಳೂರು, ಜೂ.16: ರಾಜ್ಯ ಸರಕಾರವು ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ 25 ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1 ಲಕ್ಷ ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸುತ್ತದೆ.

2017ನೆ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಅವರಿಗೆ ಆಗಸ್ಟ್ 31ರೊಳಗೆ ಸಲ್ಲಿಸಬೇಕಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ಕನ್ನಡ ಭಾಷೆಯಲ್ಲೇ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News