ರಾಷ್ಟ್ರಪತಿ ಭೇಟಿ: ಅಂಗಡಿ ಮುಚ್ಚಲು ಆದೇಶ
ಉಡುಪಿ, ಜೂ.16: ರವಿವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉಡುಪಿ ಜಿಲ್ಲೆಗೆ ಆಗಮಿಸಿ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಲಿರುವುದರಿಂದ ಕೊಲ್ಲೂರು ಗ್ರಾಪಂ ನಿಂದ ಶ್ರೀಮುಕಾಂಬಿಕಾ ದೇವಸ್ಥಾನದ ಸುತ್ತಲೂ ಇರುವ ಅಂಗಡಿ ಮುಂಗಟ್ಟುಗಳನ್ನು ಹಾಗೂ ಉಡುಪಿ ಸಂಸ್ಕೃತ ಕಾಲೇಜು ಪಕ್ಕದ ಗೇಟಿನಿಂದ ಸಂಪೂರ್ಣ ರಥಬೀದಿಯ ಸುತ್ತ ಇರುವ ಹಾಗೂ ರಾಜಾಂಗಣ ಸುತ್ತಮುತ್ತಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಜೂ.18ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹೆದ್ದಾರಿ ಸಂತೆಗಳಿಗೆ ನಿಷೇಧ: ರಾಷ್ಟ್ರಪತಿಗಳು ಆಗಮಿಸಿ ಶ್ರೀಕೃಷ್ಣಮಠ ಮತ್ತು ಕೊಲ್ಲೂರು ಮೂಕಾಂಬಿಕ ದೇವಸ್ಥಾನಗಳಿಗೆ ಭೇಟಿ ನೀಡಲಿರುವುದರಿಂದ ಸಂಚರಿಸಲಿರುವ ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಇಕ್ಕೆಲಗಳಲ್ಲಿ ಹಾಗೂ ಕೊಲ್ಲೂರು ಶ್ರೀಮೂಕಾಂಬಿಕ ದೇವಸ್ಥಾನಕ್ಕೆ ತೆರಳುವ ಮಾರ್ಗದ ಇಕ್ಕೆಲಗಳಲ್ಲಿ ಹಾಗೂ ನಗರಸಭಾ ವ್ಯಾಪ್ತಿಯ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಜೂ.18ರಂದು ಸಂತೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.