ಮುಖ್ಯನ್ಯಾಯಮೂರ್ತಿ ಮುಖರ್ಜಿ ವರ್ಗಾವಣೆಗೆ ಆಗ್ರಹ
Update: 2017-06-16 20:41 IST
ಬೆಂಗಳೂರು, ಜೂ. 16: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ರಾಜ್ಯ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿಯನ್ನು ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡಬೇಕು ಎಂದು ಸಮಾನ ಮನಸ್ಕರ ವಕೀಲರ ವೇದಿಕೆ ಮುಖಂಡ ಅಮೃತೇಶ್ ಒತ್ತಾಯಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾದಂತಹ ವ್ಯಕ್ತಿಗಳು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು. ಆದರೆ, ಎಸ್.ಕೆ.ಮುಖರ್ಜಿ ನ್ಯಾಯಮೂರ್ತಿಯಾದ ನಂತರದಿಂದ ಹಲವಾರು ಪ್ರಕರಣಗಳಲ್ಲಿ ಮಧ್ಯಪ್ರವೇಶ ಮಾಡಿ ಲಾಭ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಆರೋಪಿಸಿದರು.