×
Ad

ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿಗೆ ಸಚಿವ ಆಂಜನೇಯ ನೇತೃತ್ವದ ನಿಯೋಗದ ಮನವಿ

Update: 2017-06-16 21:27 IST

ಬೆಂಗಳೂರು, ಜೂ. 16: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧದ ತಿದ್ದುಪಡಿ ಕಾಯ್ದೆಗೆ ಅಂಕಿತ ಹಾಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ನೇತೃತ್ವದ ನಿಯೋಗ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಮನವಿ ಮಾಡಿದೆ.

ಶುಕ್ರವಾರ ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿದ ಆಂಜನೇಯ ನೇತೃತ್ವದ ನಿಯೋಗದಲ್ಲಿ ಸಂಸದರಾದ ಕೆ.ಎಚ್. ಮುನಿಯಪ್ಪ, ಧ್ರುವನಾರಾಯಣ್, ಬಿ.ಎನ್.ಚಂದ್ರಪ್ಪ, ಬಿ.ವಿ.ನಾಯಕ್, ಶಾಸಕರಾದ ರಾಜು ಅಲಗೂರ್, ಸತೀಶ್ ಜಾರಕಿಹೊಳಿ, ರಾಜ್ಯ ಸರಕಾರದ ಹೊಸದಿಲಿ ಹೆಚ್ಚುವರಿ ವಿಶೇಷ ಪ್ರತಿನಿಧಿ ಸಲೀಂ ಅಹಮದ್, ಸಮಾಜ ಕಲ್ಯಾಣ ಇಲಾಖೆ ಸಲಹೆಗಾರ ವೆಂಕಟಯ್ಯ, ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಉಪಸ್ಥಿತರಿದ್ದರು.

ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಜಿಪಂ, ಗ್ರಾಮೀಣ ಸಮಗ್ರ ಮೂಲ ಸೌಕರ್ಯ ನಿಗಮ ಸೇರಿದಂತೆ ಮತ್ತಿತರ ಇಲಾಖೆಗಳ ಕಾಮಗಾರಿಗಳನ್ನು 50ಲಕ್ಷ ರೂ.ವರೆಗಿನ ಗುತ್ತಿಗೆಯನ್ನು ಎಸ್ಸಿ-ಎಸ್ಟಿ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಉಭಯ ಸದನ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಆ ಬಳಿಕ ಮಸೂದೆ ರಾಷ್ಟ್ರಪತಿ ಅಂಕಿತಕ್ಕೆ ರವಾನಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News