×
Ad

ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾಗಿ ಜಗದೀಶ್ ಹಿರೇಮನಿ ನೇಮಕ

Update: 2017-06-17 19:52 IST

ಬೆಂಗಳೂರು, ಜೂ.17: ಕೇಂದ್ರದ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರನ್ನಾಗಿ ಬೆಂಗಳೂರಿನ ಜಗದೀಶ್ ಹಿರೇಮನಿ ಅವರನ್ನು ನೇಮಕ ಮಾಡಲಾಗಿದೆ.

ಇವರು ಜೂ.17ರಿಂದ 26ರ ವರೆಗೆ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಅವಧಿಯಲ್ಲಿ ಸಫಾಯಿ ಕರ್ಮಚಾರಿಗಳ ಬಗ್ಗೆ ಜೂ.20ರ ಬೆಳಗ್ಗೆ 11ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 313ರಲ್ಲಿ ಸಭೆ ನಡೆಸಲಿದ್ದಾರೆ. ಜೂ.26ರ ವರೆಗೆ ಸಫಾಯಿ ಕರ್ಮಚಾರಿಗಳು ಹಾಗೂ ಅವರ ಅವಲಂಬಿತರು ಹಾಗೂ ಸಂಬಂಧಿಸಿದ ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News