×
Ad

ಮಧ್ಯಪ್ರದೇಶದಲ್ಲಿ ಒಂದೇ ವಾರದಲ್ಲಿ 10 ರೈತರು ಆತ್ಮಹತ್ಯೆಗೆ ಶರಣು

Update: 2017-06-17 21:00 IST

ಧಾರ್, ಜೂ.17: ಮಧ್ಯಪ್ರದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ದಿನೇದಿನೇ ಹೆಚ್ಚಳವಾಗುತ್ತಿದ್ದು, ಒಂದೇ ವಾರದಲ್ಲಿ 10 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಂಪುರದಲ್ಲಿ 35 ವರ್ಷದ ಜಗದೀಶ್ ಮೋರೆ ಎಂಬ ರೈತ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್ ನ ಒತ್ತಡದಿಂದ ಕಂಗಾಲಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಹೇಳಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ನರಸಿಂಹಪುರದ ಇಮ್ರತ್ ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಳಿಗೆಗಳನ್ನು ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

10 ವರ್ಷಗಳ ಹಿಂದೆ ಅವರು ತುಂಡುಭೂಮಿಯೊಂದನ್ನು ಖರೀದಿಸಿದ್ದು, ಇದುವರೆಗೂ ಅವರ ಹೆಸರಿಗೆ ನೋಂದಣಿಯಾಗಿರಲಿಲ್ಲ. ಇದರಿಂದ ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News