×
Ad

ಪೊಲೀಸ್ ಪೇದೆಗೆ ಕಪಾಳಮೋಕ್ಷ: ಯುವತಿ ಬಂಧನ

Update: 2017-06-17 21:25 IST

ಬೆಂಗಳೂರು, ಜೂ.17: ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭ ಕರ್ತವ್ಯದಲ್ಲಿದ್ದ ಸಂಚಾರಿ ಪೇದೆಯೋರ್ವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಯುವತಿಯೊಬ್ಬಳನ್ನು ಹೈಗ್ರೌಂಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಫ್ರೇಝಾರ್‌ಟೌನ್ ನಿವಾಸಿ ಸಾರಿಕಾ(21) ಬಂಧಿತ ಯುವತಿ ಎಂದು ಪೊಲೀಸರು ತಿಳಿಸಿದ್ದಾರೆ.
 
ಘಟನೆ ವಿವರ: ಜೂನ್ 12ರಂದು ಉಪರಾಷ್ಟ್ರಪತಿ ಹಾಮೀದ್ ಅನ್ಸಾರಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಬೆಂಗಳೂರಿಗೆ ಆಗಮಿಸಿ ವಸಂತನಗರದಲ್ಲಿರುವ ಅಂಬೇಡ್ಕರ್ ಭವನಕ್ಕೆ ತೆರಳುತ್ತಿದ್ದ ಮಾರ್ಗದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಬೆಂಗಾವಲು ಕಾರಿನ ಹಿಂದೆಯೇ ಬೈಕ್‌ನಲ್ಲಿ ಸಾರಿಕಾ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಕೆಜಿಹಳ್ಳಿ ಸಂಚಾರಿ ಠಾಣೆಯ ಪೇದೆ ವೆಂಕಟೇಶ್ ಅವರು ಸಾರಿಕಾ ಅವರ ಸ್ಕೂಟರ್ ಅಡ್ಡಗಟ್ಟಿ ನಿಲ್ಲಿಸಿದ್ದರು. ಇದರಿಂದ ಆಕ್ರೋಶಗೊಂಡ ಪೇದೆಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ವೆಂಕಟೇಶ್ ಅವರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಾರಿಕಾನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News