ಬಾವಿಗೆ ಹಾರಿ ಯುವಕ ಆತ್ಮಹತ್ಯೆ
ಮೂಡುಬಿದಿರೆ, ಜೂ. 17: ಅವಿವಾಹಿತ ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಮುಂಡ್ಕೂರು ಗ್ರಾಮದ ದೈಲಬೆಟ್ಟು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ದೈಲಬೆಟ್ಟು ಮರ್ದ ಪೂಜಾರಿ ಎಂಬವರ ಪುತ್ರ ಲೋಕೇಶ್ ಕುಮಾರ್(29) ಎಂದು ಗುರುತಿಸಲಾಗಿದೆ.
ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದ ಈತ ರಜೆ ಹಿನ್ನೆಲೆಯಲ್ಲಿ ಹತ್ತು ದಿನಗಳ ಹಿಂದೆ ಊರಿಗೆ ಬಂದಿದ್ದ. ಊರಲ್ಲಿ ಕೆಲವು ದಿನಗಳಿಂದ ಈತ ಮಂಕಾಗಿದ್ದ ಎನ್ನಲಾಗಿದೆ. ತನ್ನ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಹಾಗೂ ಬಂಗಾರವನ್ನು ಸಂಬಂಧಿಕರಿಗೆ ನೀಡಿದ್ದ ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿ ಮನೆಯಲ್ಲೇ ಇದ್ದು ಬಳಿಕ ಕಾಣೆಯಾಗಿದ್ದ ಎನ್ನಲಾಗಿದೆ. ಈತ ಕಾಣೆಯಾದ ವಿಷಯ ಮರುದಿನ ಬೆಳಗ್ಗೆ ಮಾಹಿತಿ ಅರಿತ ಸ್ಥಳೀಯರು ಹುಡುಕಾಡಲಾರಂಭಿಸಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಯಿತ್ತೆನ್ನಲಾಗಿದೆ.
ಲೋಕೇಶ್ ಅವರ ತಂದೆ ಮಾನಸಿಕವಾಗಿ ದುರ್ಬಲರಾಗಿದ್ದರೆನ್ನಲಾಗಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.