ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ: ಸಹ ಸವಾರ ಮೃತ್ಯು
Update: 2017-06-17 22:33 IST
ಮಂಗಳೂರು, ಜೂ. 17: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರನೋರ್ವ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಪಣಂಬೂರು ಜಂಕ್ಷನ್‌ನಲ್ಲಿ ನಡೆದಿದೆ.
ಮೃತರನ್ನು ಆನಂದ (39) ಎಂದು ಗುರುತಿಸಲಾಗಿದೆ. ಯೆಲ್ಲಪ್ಪ (43) ಮತ್ತು ಆನಂದ ಇಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದರು. ಯಲ್ಲಪ್ಪ ಸ್ಕೂಟಿಯನ್ನು ಚಾಲನೆ ಮಾಡುತ್ತಿದ್ದರೆ, ಆನಂದ ಹಿಂಬದಿಯಲ್ಲಿ ಕುಳಿತಿದ್ದರು. ಸ್ಕೂಟಿ ಪಣಂಬೂರು ಜಂಕ್ಷನ್ ಬಳಿ ತಲುಪುತ್ತಿದ್ದಂತೆ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ.
ಪರಿಣಾಮವಾಗಿ ಸ್ಕೂಟಿಯಲ್ಲಿದ್ದ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು. ಈ ಪೈ ಗಂಭೀರ ಗಾಯಗೊಂಡ ಆನಂದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟರೆಂದು ಹೇಳಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.