ಕಾರು ಢಿಕ್ಕಿ: ಇಬ್ಬರು ಕಾರ್ಮಿಕ ಮಹಿಳೆಯರ ಮೃತ್ಯು
Update: 2017-06-18 21:58 IST
ಮದ್ದೂರು, ಜೂ.18: ಕಾರು ಢಿಕ್ಕಿಯೊಡೆದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತಾಲೂಕಿನ ಸೋಮನಹಳ್ಳಿ ಬಳಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇಂದು ನಡೆದಿದೆ.
ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ ಕಾರ್ಖಾನೆಗೆ ಕೆಲಸಕ್ಕೆ ತೆರಳಲು ಹೆದ್ದಾರಿ ದಾಟುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ತಾಲೂಕಿನ ತೊಪ್ಪನಹಳ್ಳಿಯ ಪ್ರಮೀಳಾ(25) ಹಾಗೂ ಕಬ್ಬಾರೆ ಗ್ರಾಮದ ಶಿಲ್ಪ(23) ಸಾವನ್ನಪ್ಪಿದ್ದಾರೆ.
ಎಂದಿನಂತೆ ಹೆದ್ದಾರಿ ದಾಟುತ್ತಿದ್ದ ಈ ಮಹಿಳೆಯರಿಗೆ ಬೆಂಗಳೂರಿನಿಂದ ಮೈಸೂರು ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಢಿಕ್ಕಿಯೊಡೆದಿದ್ದು, ಪ್ರಮೀಳಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಶಿಲ್ಪ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟರು.
ಮದ್ದೂರು ಸಂಚಾರಿ ಠಾಣೆ ಪೊಲೀಸರು ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.