×
Ad

ಅಡುಗೆ ಸಹಾಯಕರ ನೇಮಕಾತಿ: ದಾಖಲಾತಿ ಪರಿಶೀಲನೆ

Update: 2017-06-18 23:52 IST

ಮಂಗಳೂರು, ಜೂ.18: ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಡಿ ವೃಂದದ ಅಡುಗೆಯವರು ಮತ್ತು ಅಡುಗೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಅಭ್ಯರ್ಥಿಯು ಎಸೆಸೆಲ್ಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮೆರಿಟ್ ಆಧಾರದ ಮೇಲೆ 1:5 ಅನುಪಾತದಲ್ಲಿ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯನ್ನು ನೇತ್ರಾವತಿ ಸಭಾಂಗಣ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇಲ್ಲಿ ಜೂನ್ 22 ರಂದು ಅಡುಗೆಯವರ ಹುದ್ದೆ ಹಾಗೂ 23 ರಂದು ಅಡುಗೆ ಸಹಾಯಕರ ಹುದ್ದೆಗೆ ಬೆಳಗ್ಗೆ 10 ಗಂಟೆಗೆ ದಾಖಲಾತಿ ಪರಿಶೀಲನೆ ನಡೆಯಲಿದೆ.

ದಾಖಲಾತಿ ಪರಿಶೀಲನೆಗಾಗಿ ಪ್ರಕಟಿಸಿರು ಅಭ್ಯರ್ಥಿಗಳ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಮಾತ್ರ ವೆಬ್‌ಸೈಟ್‌ನಲ್ಲಿ ಕಾಲ್‌ಲೆಟರನ್ನು ಡೌನ್‌ಲೋಡ್ ಮಾಡಿಕೊಂಡು, ಕಾಲ್‌ಲೆಟರ್‌ನಲ್ಲಿ ತಿಳಿಸಿರುವಂತೆ ಎಲ್ಲಾ ಮೂಲ ದಾಖಲೆಗಳು ಮತ್ತು ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ನಿಗದಿತ ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳದಲ್ಲಿ ಹಾಜರಿರಬೇಕು.

ಈ ಮೇಲೆ ನಿಗದಿಪಡಿಸಿದ ದಿನಗಳ ಹೊರತು ಬೇರೆ ದಿನಗಳಲ್ಲಿ ದಾಖಲೆಗಳನ್ನು ಸಲ್ಲಿಸಲು ಅವಕಾಶರುವುದಿಲ್ಲ. ನಿಗದಿತ ದಿನಾಂಕದಂದು ಹಾಜರಾಗದೆ ಇರುವ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0824-2225078 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News