×
Ad

ರೈತರ ಸಾಲ ಮನ್ನಾ, ಮದ್ಯಪಾನ ನಿಷೇಧಕ್ಕೆ ಆಗ್ರಹ

Update: 2017-06-19 17:58 IST

ಬೆಂಗಳೂರು,ಜೂ.19: ಮದ್ಯಪಾನ ನಿಷೇಧ ಹಾಗೂ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಸಂಯುಕ್ತ ಜನತಾದಳ ಕಾರ್ಯಕರ್ತರು ಇಂದು ನಗರದಲ್ಲಿ ಧರಣಿ ನಡೆಸಿದರು.

ಸೋಮವಾರ ನಗರದ ಕುಮಾರ ಪಾರ್ಕ್‌ನಲ್ಲಿರುವ ಸಂಯುಕ್ತ ಜನತಾದಳ ಪಕ್ಷದ ಕಚೇರಿಯಿಂದ ಬೆಳಗ್ಗೆ ಪಾನ ನಿಷೇಧ ಹಾಗೂ ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಆನಂದ್‌ರಾವ್ ವೃತ್ತದ ಗಾಂಧಿ ಪ್ರತಿಮೆವರೆಗೆ ಪಾದಯಾತ್ರೆ ನಡೆಸಿದರು.

ಗಾಂಧಿ ಪ್ರತಿಮೆ ಬಳಿ ಸಮಾವೇಶಗೊಂಡ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉಮೇಶ್ ಮಾತನಾಡಿ, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಎಲ್ಲಾ ಬಗೆಯ ಸಾಲ ಮನ್ನಾ ಮಾಡಿ ರೈತರ ಆತ್ಮಹತ್ಯೆಯನ್ನು ತಡೆಗಟ್ಟಲು ರೈತ ಪರ ಯೋಜನೆಗಳು, ಕಾರ್ಯಕ್ರಮಗಳನ್ನು ರೂಪಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News