ಗಂಗೊಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪುಸ್ತಕ ವಿತರಣೆ

Update: 2017-06-19 12:45 GMT

ಕುಂದಾಪುರ, ಜೂ.19: ಶಿಕ್ಷಣವನ್ನು ಜಾತಿ ಮತ ಭೇಧವಿಲ್ಲದೆ ಎಲ್ಲರೂ ಪಡೆಯಬಹುದು. ಶಿಕ್ಷಣದ ಮುಖಾಂತರ ಪ್ರತಿಯೊಬ್ಬ ವಿದ್ಯಾರ್ಥಿಗಳು ಜ್ಞಾನ ವನ್ನು ಪಡೆಯಬೇಕು. ಜ್ಞಾನ ಎಂಬುವುದು ಪ್ರತಿಯೊಬ್ಬರ ಸೊತ್ತು ಆಗಿದೆ ಎಂದು ಸರಕಾರಿ ಆಯುರ್ವೆದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಹೇಳಿದ್ದಾರೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕದ ಆಶ್ರಯದಲ್ಲಿ ಗಂಗೊಳ್ಳಿ ಶಾರದ ಮಂಟಪದಲ್ಲಿ ಇತ್ತೀಚೆಗೆ ನಡೆದ ಕಾರ್ಮಿಕರ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಇಂದು ಬಹಳಷ್ಟು ಜನರಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗುತ್ತಿದೆ. ಕನ್ನಡದಲ್ಲಿ ಕಲಿತರೆ ಉನ್ನತ ಹುದ್ದೆ ಸಿಗಲ್ಲ ಎಂಬ ತಪ್ಪು ಅಭಿಪ್ರಾಯವಿದೆ. ಇನ್ನು ಕೆಲವರಿಗೆ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸುವುದು ಪ್ರತಿಷ್ಠೆ ವಿಷಯ ಆಗಿದೆ. ಮಕ್ಕಳಲ್ಲಿರುವ ಬೇರೆ ಬೇರೆ ರೀತಿಯ ಪ್ರತಿಭೆಗಳನ್ನು ಗುರುತಿಸುವ ಕೆಲಸವಾಗಬೇಕು ಎಂದರು.

 ಉಡುಪಿ ಜಿಲ್ಲಾ ಕಸಪಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಸಿಐ ಟಿಯು ಮುಖಂಡ ಸುರೇಶ್ ಕಲ್ಲಾಗರ, ಗಂಗೊಳ್ಳಿ ಶಾರದೋತ್ಸವ ಸಮಿತಿಯ ಅಧ್ಯಕ್ಷ ಸತೀಶ್ ಜಿ., ಸಂಘದ ಗಂಗೊಳ್ಳಿ ಘಟಕದ ಗೌರವಾಧ್ಯಕ್ಷ ಚಿಕ್ಕ ಮೊಗವೀರ ಮಾತನಾಡಿದರು.

ಈ ಸಂದರ್ಭದಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 8ನೆ ಸ್ಥಾನ ಪಡೆದ ದೀಕ್ಷಾ ಭಟ್ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಮಂಜು ನಾಥ್ ವಹಿಸಿದ್ದರು. ಘಟಕ ಕಾರ್ಯದರ್ಶಿ ನಾಗರಾಜ್, ಪ್ರಶಾಂತ್, ಚಿಕ್ಕ ಉಪಸ್ಥಿತರಿದ್ದರು. ಅಧ್ಯಕ್ಷ ಲೋಕೇಶ್ ಪೂಜಾರಿ ಸ್ವಾಗತಿಸಿದರು. ಕಟ್ಟಡ ಸಂಘದ ತಾಲೂಕು ಕಾರ್ಯದರ್ಶಿ ಅರುಣ್ ಕುಮಾರ್ ವಂದಿಸಿದರು. ಸುಂರ್ ಜಿ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News