ನಿಟ್ಟೂರು: ಶಿಕ್ಷಕ-ರಕ್ಷಕ ಸಂಘದ ಮಹಾಸಭೆ
ಉಡುಪಿ, ಜೂ.19: ನಿಟ್ಟೂರು ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಶಿಕ್ಷಕ- ರಕ್ಷಕ ಸಂಘದ ಮಹಾಸಭೆಯನ್ನು ನಿಟ್ಟೂರು ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷ, ಮಾಜಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು.
ಮನೋ ತಜ್ಞ ಡಾ.ಪಿ.ವಿ.ಭಂಡಾರಿ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಗಳಾದ ಬಾಲಾಜಿ ರಾಘವೇಂದ್ರ ಆಚಾರ್ಯ, ಸಿದ್ಧರಾಜು ಭಾಗವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿ್ಣು ಮೂರ್ತಿ ಶಾಸ್ತ್ರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ವಿದ್ಯಾರ್ಥಿಗಳಿಗೆ ಉಚಿತ ವಾಗಿ ನೀಡುವ ವಿವಿಧ ಸೌಲಭ್ಯಗಳ ಬಗ್ಗೆ ತಿಳಿಸಿದರು. ಪ್ರಸ್ತುತ ವರ್ಷ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ ಕೃಷ್ಣಪ್ರಸಾದ್ ಹಾಗೂ ದ್ವಿತೀಯ ಸ್ಥಾನ ಗಳಿಸಿದ ಬಿ.ಆರ್.ರಜತ್ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗೆ 10,000ರೂ. ನೀಡು ವುದಾಗಿ ಸಿದ್ಧರಾಜು ಘೋಷಿಸಿದರು.
ಸಂಘದ ಕಾರ್ಯದರ್ಶಿ ಎಚ್.ಎಂ.ಶೃಂಗೇಶ್ವರ್ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಿದರು. ಶಿಕ್ಷಕಿ ನಮಿತಾಶ್ರೀ ವಂದಿಸಿದರು. ಶಿಕ್ಷಕಿ ಅಸೂಯ ಕಾರ್ಯಕ್ರಮ ನಿರೂಪಿಸಿದರು.