ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಕೊಡುಗೆ ಮಹತ್ವದ್ದು :ಕ್ಯಾ. ಗಣೇಶ್ ಕಾರ್ಣಿಕ್

Update: 2017-06-19 12:53 GMT

ಉಳ್ಳಾಲ,ಜೂ.19: ಗುಣಮಟ್ಟದ ಶಿಕ್ಷಣ ನಮ್ಮ ಬದುಕನ್ನು ಸುಂದರವಾಗಿ ರೂಪಿಸುತ್ತದೆ. ಹಾಗೆಯೇ ಶಿಕ್ಷಣದ ಜೊತೆಗೆ ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಳ್ಳುವುದರಿಂದ ದೇಶದ ಅಭಿವೃದ್ಧಿಯಲ್ಲಿ ನಾವು ಕೊಡುಗೆ ನೀಡಲು ಸಾಧ್ಯ. ಎಲ್ಲಕ್ಕಿಂತ ಮುಖ್ಯವಾಗಿ ನಮ್ಮಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಹಾಗೂ ವೈಯಕ್ತಿಕ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು.

 ಉಳ್ಳಾಲ ಸುಭಾಷ್‌ನಗರದ ಕೆ. ಪಾಂಡ್ಯರಾಜ ಬಲ್ಲಾಳ್ ಕಾಲೇಜಿನಲ್ಲಿ ರಾಷ್ಟ್ರಿೀಯ ಸೇವಾ ಯೋಜನೆಯಡಿಯಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಆರು ದಿನಗಳ ಕಾಲ ನಡೆಯಲಿರುವ ಶಿಬಿರವನ್ನು ಕಾಲೇಜಿನ ಆಡಿಟೋರಿಯಂನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

 ವಿದ್ಯಾರ್ಥಿಗಳು ಕೇವಲ ತರಗತಿಯ ಕೊಠಡಿಯಲ್ಲಿ ಸಿಗುವ ಶಿಕ್ಷಣಕ್ಕೆ ಜೋತುಬೀಳದೆ ಮಾನವೀಯ ಶಿಕ್ಷಣ ತಮ್ಮದಾಗಿಸಿಕೊಳ್ಳಬೇಕು. ಈ ಸಮಾಜ ನಮ್ಮಿಂದ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು ಅದನ್ನು ಈಡೇರಿಸುವ ಪ್ರಯತ್ನ ಮಾಡಬೇಕು. ಸಮಾಜಮುಖಿ ಸೇವೆಗಳು ನಮ್ಮಿಂದಾಗಬೇಕು ಎಂದು ನುಡಿದರು.

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕೆ. ಪಾಂಡ್ಯರಾಜ ಬಲ್ಲಾಳ್ ಟ್ರಸ್ಟ್‌ನ ಮೆನೇಜಿಂಗ್ ಟ್ರಸ್ಟಿ ಡಾ. ಪ್ರಿಯಾ ಕೆ. ಬಲ್ಲಾಳ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

 ಕೆ. ಪಾಂಡ್ಯರಾಜ ಬಲ್ಲಾಳ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಖೇಶ್ ರಾವ್ ಉಪಸ್ಥಿತರಿದ್ದರು.

  ಬಿ.ಎಸ್ಸಿ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿ ಮೇರಿ ಪೀಟರ್ ಸ್ವಾಗತಿಸಿದರು. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಕೈನಿ ಸಿಸಿಲಿಯಾ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ಪರಿಚಯಿಸಿದರು. ಚೈತ್ರಾ ನಾಯಕ್ ಶಿಬಿರದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಎಸ್ಸಿ ನರ್ಸಿಂಗ್ ಎರಡನೆಯ ವರ್ಷದ ವಿದ್ಯಾರ್ಥಿಗಳಾದ ಅಂಜುಮೋಳ್ ಜಾರ್ಜ್ ಹಾಗೂ ಕೃಷ್ಣ ಸುಗೇಶ್ ಕಾರ್ಯಕ್ರಮ ನಿರೂಪಿಸಿದರು. ಬಿಎಸ್ಸಿ ನರ್ಸಿಂಗ್ ಎರಡನೆಯ ವರ್ಷದ ವಿದಾ್ಯರ್ಥಿನಿ ಅನೀನಾ ನೌಶಾದ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News