ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ
ಹನೂರು,ಜೂ.19: ಅಕ್ರಮ ಸಂಬಂಧದ ಶಂಕೆ ಹಿನ್ನಲೆ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಹನೂರು ಪೋಲಿಸ್ ಠಾಣಾ ವ್ಯಾಪ್ತಿಯ ಶಿರಗೋಡು ಗ್ರಾಮದಸಮೀಪದ ಲಂಬಾಣಿ ತಾಂಡಾದಸಲ್ಲಿ ಭಾನುವಾರ ರಾತ್ರಿ ನಡೆದಿದೆ.
ಶಿರಗೋಡು ಗ್ರಾಮದ ಜಯಬಾಯಿ (35) ಕೊಲೆಗೀಡಾದ ಮೃತ ದುರ್ದೈವಿ. ಸುಂದರ್ ನಾಯ್ಕ ಎಂಬಾತನೇ ಪತ್ನಿಯನ್ನು ಕೊಲೆಗೈದಿರುವ ಆರೋಪಿ. ಈತ ಕಳೆದ 17 ವರ್ಷದ ಹಿಂದೆ ವಿವಾಹವಾಗಿದ್ದು, ಇವರು ಗ್ರಾಮದ ತೋಟದ ಜಮೀನಿನಲ್ಲಿ ವಾಸವಾಗಿದ್ದರು. ಈಕೆಯ ಪತ್ನಿ ಜಯಬಾಯಿ ಗ್ರಾಮದ ಶಿವು ಎಂಬಾತನೊಂದಿಗೆ ಕೆಲವು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ಬಗ್ಗೆ ಗಂಡಹೆಂಡಿರ ನಡುವೆ ಮನೆಯಲ್ಲಿ ಗಲಾಟೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.
ಇದನ್ನು ಸಹಿಸದ ಪತಿ ಸುಂದರ್‌ನಾಯ್ಕ ಭಾನುವಾರ ರಾತ್ರಿ ಸುಮಾರು 10.30ರಲ್ಲಿ ಜಯಬಾಯಿಯನ್ನು ಮನೆಯಿಂದ ಕರೆದು ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ. ಸುದ್ದಿ ತಿಳಿದು ಹನೂರು ಪೋಲಿಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದರು. ಮೃತದೇಹವನ್ನು ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು. ಈ ಸಂಬಂಧ ಹನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.