ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್..?

Update: 2017-06-19 15:11 GMT

ಹೊಸದಿಲ್ಲಿ, ಜೂ.19: ಲೋಕಸಭೆಯ ಮಾಜಿ ಸ್ಪೀಕರ್, ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಅವರ ಪುತ್ರಿ ಮೀರಾ ಕುಮಾರ್ ರಾಷ್ಟ್ರಪತಿ ಹುದ್ದೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

  ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದಲಿತ ಮುಖಂಡ ರಾಮ್‌ನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಿರುವುದಾಗಿ ಬಿಜೆಪಿ ಘೋಷಿಸಿ ಪ್ರತಿಪಕ್ಷಗಳ ಬೆಂಬಲ ಕೋರಿದೆ. ಆದರೆ ಬೆಂಬಲ ನೀಡುವ ಬಗ್ಗೆ ಜೂನ್ 22ರಂದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಬಹುತೇಕ ವಿಪಕ್ಷಗಳು ತಿಳಿಸಿವೆ.

 ಈ ಮಧ್ಯೆ, ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಝಾದ್, ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಏಕಪಕ್ಷೀಯವಾಗಿ ಅಭ್ಯರ್ಥಿಯನ್ನು ಘೋಷಿಸಿರುವ ಕಾರಣ ಜೂನ್ 22ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News