ನಜೀಬ್ ನಾಪತ್ತೆ ಪ್ರಕರಣ: ಜೆಎನ್‌ಯುಗೆ ಸಿಬಿಐ ತಂಡ

Update: 2017-06-19 16:17 GMT

ಹೊಸದಿಲ್ಲಿ, ಜೂ. 19: ಕಳೆದ ವರ್ಷ ಅಕ್ಟೋಬರ್ 16ರಂದು ವಿದ್ಯಾರ್ಥಿ ವಸತಿ ನಿಲಯದಿಂದ ನಾಪತ್ತೆಯಾಗಿರುವ ನಜೀಬ್ ಅಹ್ಮದ್ ಬಗ್ಗೆ ತನಿಖೆ ನಡೆಸಲು ಸಿಬಿಐ ತಂಡ ಸೋಮವಾರ ಜವಾಹಾರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದೆ.

ಜೆಎನ್‌ಯುನ ಮಾಹಿ-ಮಾಂಡ್ವಿ ವಿದ್ಯಾರ್ಥಿ ವಸತಿ ನಿಲಯದಲ್ಲಿ ಅಹ್ಮದ್ ಹಾಗೂ ಎಬಿವಿಪಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ ಎಂಬ ಆರೋಪದ ಬಗ್ಗೆ ಅದು ಸಿಬಿಐ ನಡೆಸುತ್ತಿದೆ.

ಈ ಪ್ರಕರಣದಲ್ಲಿ ಹೆಸರು ಕೇಳಿ ಬರುತ್ತಿರುವ ವ್ಯಕ್ತಿಗಳು ಹಾಗೂ ಶಂಕಿತರನ್ನು ಸಿಬಿಐ ತನಿಖೆ ಒಳಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ನಜೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಜಾ ಇತ್ತೀಚೆಗೆ ಸಿಬಿಐ ಅಧಿಕಾರಿಗಳನ್ನು ಭೇಟಿಯಾಗಿ ಮಗ ನಾಪತ್ತೆ ಆಗಿರುವುದರ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಮಗ ವಿದ್ಯಾರ್ಥಿ ವಸತಿ ನಿಲಯದಿಂದ ನಾಪತ್ತೆ ಆಗುವ ಮೊದಲು ನಡೆದ ಘಟನೆಗಳನ್ನು ಅವರು ಸಿಬಿಐ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News