×
Ad

ಭಾರತ ಸೋತಿದ್ದಕ್ಕೆ ಬಾಂಗ್ಲಾದ ಯುವಕ ಆತ್ಮಹತ್ಯೆ!

Update: 2017-06-19 23:41 IST

ಢಾಕಾ, ಜೂ.19: ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಕ್ರಿಕೆಟ್ ತಂಡ ಸೋತಿರುವುದಕ್ಕೆ ಹತಾಶೆಗೊಂಡ ಬಾಂಗ್ಲಾದೇಶದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಬಾಂಗ್ಲಾದೇಶದ ಜಮಾಲ್‌ಪುರ ನಿವಾಸಿ, ಭಾರತ ಕ್ರಿಕೆಟ್ ತಂಡದ ಅಭಿಮಾನಿ 25ರ ಪ್ರಾಯದ ಬಿದ್ಯುತ್ ಎಂಬಾತ ಚಲಿಸುತ್ತಿದ್ದ ರೈಲಿನಡಿಗೆ ಹಾರಿ ಮೃತಪಟ್ಟಿದ್ದಾನೆಂದು ಪೊಲೀಸ್ ಅಧಿಕಾರಿ ನಸಿರುಲ್ ಇಸ್ಲಾಮ್ ತಿಳಿಸಿದ್ದಾರೆಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ಲಂಡನ್‌ನಲ್ಲಿ ರವಿವಾರ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 180 ರನ್‌ಗಳ ಅಂತರದಿಂದ ಸೋಲುವ ಮೂಲಕ ರನ್ನರ್‌ಅಪ್‌ಗೆ ತೃಪ್ತಿಪಟ್ಟಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News