ರಾಷ್ಟ್ರಪತಿ ಚುನಾವಣೆ: ಜೂ.23ರಂದು ಆರ್. ಕೋವಿಂದ್ ನಾಮಪತ್ರ ಸಲ್ಲಿಕೆ

Update: 2017-06-20 10:43 GMT

ಹೊಸದಿಲ್ಲಿ, ಜೂ.20: ರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ರಾಮ್ ನಾಥ್  ಕೋವಿಂದ್ ಜೂನ್ 23ರಂದು  ನಾಮಪತ್ರ ಸಲ್ಲಿಸಲಿದ್ದಾರೆ.

ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೋವಿಂದ್ ಅವರು ಬಿಹಾರದ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂಗೀಕರಿಸಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News