ಯೋಗ ಮನುಷ್ಯನ ಸರ್ವಾಂಗಿಣ ಅಭಿವೃದ್ಧಿಗೆ ಪೂರಕ: ಡಿ.ಮಂಜುನಾಥಯ್ಯ
Update: 2017-06-20 18:50 IST
ಉಡುಪಿ, ಜೂ.20: ಮಾನವನ ಸರ್ವಾಂಗಿಣ ಅಭಿವೃದ್ಧಿಗೆ ಯೋಗಾಸನ ಪೂರಕ. ಪ್ರಕೃತಿಯೊಂದಿಗೆ ನಿಕಟ ಸಂಬಂಧ ಹೊಂದಿರುವ ಯೋಗವನ್ನು ನಾವು ಇಂದು ಮರೆಯುತ್ತಿದ್ದೇವೆ. ಪ್ರಕೃತಿಗೆ ವಿರುದ್ಧವಾಗಿ ವಿಕೃತಿ ಆಚರಣೆಗಳನ್ನು ಮಾಡುತ್ತಿದ್ದೇವೆ. ಆದುದರಿಂದ ನಾವು ಮತ್ತೆ ಪ್ರಕೃತಿಯ ಕಡೆ ಸಾಗಬೇಕಾಗಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತ ಡಿ.ಮಂಜುನಾಥಯ್ಯ ಹೇಳಿದ್ದಾರೆ.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಯೋಗ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.